ಸಂತ ಮೈಕಲರ ವಿದ್ಯಾಸಂಸ್ಥೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ

27/01/2021

ಮಡಿಕೇರಿ ಜ.27 : ನಗರದ ಸಂತ ಮೈಕಲರ ವಿದ್ಯಾಸಂಸ್ಥೆಯಲ್ಲಿ 72ನೇ ಗಣರಾಜ್ಯೋತ್ಸವವನ್ನು ಶಾಲೆಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಲೆಯ ವ್ಯವಸ್ಥಾಪಕ ಫಾ.ನವೀನ್‍ಕುಮಾರ್ ಗಣರಾಜ್ಯದ ಆಶೋತ್ತರಗಳನ್ನು ಈಡೇರಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ದೇಶದ ಬಗ್ಗೆ ಗೌರವ ಆಭಿಮಾನದಿಂದ ಒಂದಾಗಿ ಬಾಳಲು ಕಲಿಸುವಂತಾಗಬೇಕು ಎಂದರು.
ಕಾಲೇಜಿ ಪ್ರಾಂಶುಪಾಲರಾದ ಪ್ರೇಮಲತ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಪ್ರೌಢಶಾಲಾ ಶಿಕ್ಷಕಿ ರೀನಾ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಲ್ಕು ವಿಭಾಗದ ಮುಖ್ಯಸ್ಥರು ಭಾಗವಹಿಸಿದ್ದರು.
ಶಿಕ್ಷಕ ವಿಲ್‍ಪ್ರೆಡ್ ಕ್ರಾಸ್ತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.