ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 62

January 28, 2021

ಮಡಿಕೇರಿ ಜ. 28 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 25 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
14 ಆರ್.ಟಿ.ಪಿ.ಸಿ.ಆರ್ ಮತ್ತು 11 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 25 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಮತ್ತು 11 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6017 ಆಗಿದ್ದು, 5874 ಮಂದಿ ಗುಣಮುಖರಾಗಿದ್ದಾರೆ. 62
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 23 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!