ತಾಳತ್ತಮನೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನ ಆಚರಣೆ

January 28, 2021

ಮಡಿಕೇರಿ ಜ.28 : ವಿವಿಧ ಸಂಘಟನೆಯ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 124ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 29ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಮಡಿಕೇರಿಯ ನೇತಾಜಿ ಯುವಕ, ಯುವತಿ ಮಂಡಲಿ ಹಾಗೂ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಡಗು ಮತ್ತು ತಾಲ್ಲೂಕು ಯುವ ಒಕ್ಕೂಟ ಇದರ ಸಂಯುಕ್ತಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮನ್ನು ಹೊಟೇಲ್ ಸಮುದ್ರ ಮಾಲೀಕ ಶರತ್ ಶೆಟ್ಟಿ ಉದ್ಘಾಟಿದರು.
ಗ್ರಾ.ಪಂ. ಸದಸ್ಯ ಜೀವನ್ ಪರ್ಲಕೋಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರೀನ್ ಸಿಟಿ ಫೋರಂನ ಸ್ಥಾಪಕಾಧ್ಯಕ್ಷ ಚೆಯ್ಯಂಡ ಸತ್ಯ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಳೆಗಾರರಾದ ಎಂ.ಇ. ಸಲಾಂ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ನೂತನ ಗ್ರಾ.ಪಂ. ಸದಸ್ಯೆ ಬಿ.ಎನ್ ನವೀನ ಹಾಜರಿದ್ದರು.
ಸಭಾ ಕಾರ್ಯಕ್ರಮದ ಮುನ್ನ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಮ್ಯಾರಾಥಾನ್ ಹಾಗೂ ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗಳನ್ನು ನಡೆಸಲಾಯಿತು.
ಸಂಜೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್‍ಗಳಾಗಿ ಕರ್ತವ್ಯ ನಿರ್ವಹಿಸಿದ ಕೆ.ಡಿ. ಧರಣಿ, ಆಶಾ ಕಾರ್ಯಕರ್ತೆ ಸಿ.ಬಿ. ರಮ್ಯ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ ನೇತಾಜಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಎಂ.ಪಿ. ಲೋಕೇಶ್ ನೇತಾಜಿ ಯುವತಿ ಮಂಡಲದ ಮಾಜಿ ಅಧ್ಯಕ್ಷೆ ಕೆ.ಎಸ್. ಸುಲೋಚನಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಮದೆ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಹಾಜರಿದ್ದರು.
ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

error: Content is protected !!