ಜಿಲ್ಲಾ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ : ಜ. 31 ರಂದು ಬಹುಮಾನ ವಿತರಣಾ ಸಮಾರಂಭ

January 28, 2021

ಮಡಿಕೇರಿ ಜ.28 : ಕೊಡಗಿನಲ್ಲಿ ಜಾನಪದವನ್ನು ಉಳಿಸಿ ಬೆಳಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಾನಪದ ಪರಿಷತ್, ಕರ್ನಾಟಕ ಜಾನಪದ ಪರಿಷತ್‍ನ ಸಹಕಾರದೊಂದಿಗೆ ಈಗಾಗಲೇ ಸಾಕಷ್ಟು ಜಾನಪದ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ನಡೆಸಿದೆ.
ಇದರ ಮುಂದುವರಿದ ಭಾಗವಾಗಿ 2020 ರ ಡಿಸೆಂಬರ್ ತಿಂಗಳಿನಲ್ಲಿ ವಾಟ್ಸಾಪ್ ಮೂಲಕ ಕೊಡಗು ಜಿಲ್ಲಾ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 130 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದ ಈ ಸ್ಪರ್ಧೆಯಲ್ಲಿ 16 ಮಂದಿ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.
ತಾ. 31 ರಂದು ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಾನಪದ ಪರಿಷತ್‍ನ ಅಧ್ಯಕ್ಷರಾದ ಬಿ.ಜಿ. ಅನಂತಶಯನ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಿತ್ರ ಕಲಾ ಶಿಕ್ಷಕ ಉ.ರ. ನಾಗೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!