ಜ. 30 ಮತ್ತು 31 ರಂದು ಕೂಡಿಗೆಯಲ್ಲಿ ಕ್ರೀಡಾಪಟುಗಳ ಆಯ್ಕೆ

January 28, 2021

ಮಡಿಕೇರಿ ಜ.28 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ, ಕ್ರೀಡಾ ನಿಲಯಗಳಿಗೆ 2021-22 ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯನ್ನು ವಿಭಾಗ ಮತ್ತು ರಾಜ್ಯ ಮಟ್ಟದಲ್ಲಿ ನಡೆಸಲಾಗುತ್ತದೆ. ಆದ್ದರಿಂದ ಜನವರಿ, 30 ಮತ್ತು 31 ರಂದು ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢ ಶಾಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ತಿಳಿಸಿದ್ದಾರೆ.

error: Content is protected !!