ಶಿವಮೊಗ್ಗ ಸ್ಪೋಟದ ತನಿಖೆಗೆ ಕರ್ನಾಟಕ ಲೋಕಾಯುಕ್ತರ ಆದೇಶ

January 29, 2021

ಬೆಂಗಳೂರು: ಶಿವಮೊಗ್ಗದ ಜಿಲೆಟಿನ್‌ ಸ್ಫೋಟವೂ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಯಂತ್ರಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಜಿಲ್ಲಾಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಸೂಚನೆ ನೀಡಿದ್ದಾರೆ.

”ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಬೇಕು. ರಾಯಲ್ಟಿ ವಸೂಲಿ ಮಾಡಬೇಕು. ದಂಡ ವಿಧಿಸಬೇಕು ಎಂದು ಸೂಚಿಸಲಾಗಿದೆ. ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಆರ್ಥಿಕ ನಷ್ಟದ ಜತೆಗೆ ಪರಿಸರ ಅಸಮತೋಲನ, ಭೂಮಿಯ ಮೇಲ್ಮೈ ನಾಶವಾಗುತ್ತದೆ. ನಾಗರಿಕರು ಮತ್ತು ಇತರ ಜೀವಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ,” ಎಂದು ಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸಹಳ್ಳಿ ತಾಲೂಕು ಮಸಗಳ್ಳಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತರು, ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮೂಲಕ ತನಿಖೆ ನಡೆಸಿದ್ದರು. ವರದಿಯಲ್ಲಿ ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ಅಕ್ರಮ ಗಣಿಗಾರಿಕೆ ತಡೆಯಲು ವಿಫಲರಾಗಿದ್ದಾರೆ ಎಂದು 2020ರ ಫೆ.26ರಂದು ಸಲ್ಲಿಸಲಾದ ವರದಿಯಲ್ಲಿ ತಿಳಿಸಲಾಗಿತ್ತು.

error: Content is protected !!