ಗೋಹತ್ಯೆ ನಿಷೇಧ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸರ್ಕಾರಕ್ಕೆ ಹೈ ಕೋರ್ಟ್‌ ನೋಟಿಸ್‌

January 29, 2021

ನವದೆಹಲಿ: ಇತ್ತೀಚೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದ ಗೋಹತ್ಯೆ ನಿಷೇಧ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಹೈ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಕರ್ನಾಟಕ ಗೋ ಸಂರಕ್ಷಣಾ ಕಾಯ್ದೆ 2020 -21 ರ ತಿದ್ದುಪಡಿಯನ್ನು ಪ್ರಶ್ನಿಸಿ ಎಸ್.ಡಿ.ಪಿ.ಐ ರಾಜ್ಯ ಸಮಿತಿ‌ ಸದಸ್ಯ ಆನಂದ ಮಿತ್ತಬೈಲ್ ಎಂಬವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದರು. ಅರ್ಜಿಯ ವಿಚಾರಣೆಗೆ ಒಪ್ಪಿದ ಹೈ ಕೋರ್ಟ್‌ ಈ ಸಂಬಂಧ ವಿವರಣೆ ನೀಡುವಂತೆ ನೋಟಿಸ್‌ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರಿನಿವಾಸ್‌ ಓಕ ಹಾಗೂ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಂ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಲಿದ್ದು, ಫೆಬ್ರವರಿ 26 ರಂದು ಮುಂದಿನ ವಿಚಾರಣೆ ನಡೆಯಲಿದೆ.

ಕಳೆದ ಅಧಿವೇಶನದಲ್ಲಿ ವಿಧಾನಸಭೆಲಯಲ್ಲಿ ಮಂಡಿಸಿ ಅನುಮೋದನೆ ಪಡೆದು ಕೊಳ್ಳಲಾಗಿತ್ತು. ಆದರೆ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಬರದೇ ಕಾಯ್ದೆ ಬಿದ್ದು ಹೋಗಿತ್ತು.

ಇದಾದ ಬಳಿಕ ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲಾಗಿತ್ತು. ಜನವರಿ 18 ರಿಂದ ಕಾನೂನು ಜಾರಿಗೆ ಬಂದಿದೆ.

error: Content is protected !!