ಜೈ ಜವಾನ್ ಮಾಜಿ ಸೈನಿಕರ ಸಂಘದಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮದಿನಾಚರಣೆ

January 29, 2021

ಸೋಮವಾರಪೇಟೆ ಜ. 29 : ಜೈ ಜವಾನ್ ಮಾಜಿ ಸೈನಿಕರ ಸಂಘದ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮದಿನಾಚರಣೆ ಆಚರಿಸಲಾಯಿತು.
ಆವರಣದಲ್ಲಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಅಧ್ಯಕ್ಷ ಈರಪ್ಪ, ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ದೇಶ ಕಂಡ ಅಪ್ರತಿಮ, ಧೀಮಂತ ವ್ಯಕ್ತಿಯಾಗಿದ್ದ ಕಾರ್ಯಪ್ಪ ಅವರ ಆದರ್ಶಗಳನ್ನು ಯುವ ಜನರು ಮೈಗೂಡಿಸಿಕೊಳ್ಳುವ ಮೂಲಕ ದೇಶ ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳಾದ ಶಿವಪ್ಪ, ಎಂ.ಕೆ. ಸುಕುಮಾರ್, ಎಂ.ಸಿ. ಪೂವಯ್ಯ ಇದ್ದರು.

error: Content is protected !!