ರಾಷ್ಟ್ರಪತಿಗಳ ಆಗಮನಕ್ಕೆ ದಿನಗಣನೆ : ಕೊಡಗು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

January 29, 2021

ಮಡಿಕೇರಿ ಜ.29 : ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳು ಪೂರ್ಣವಾಗಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರಪತಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಎಲ್ಲಾ ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯವನ್ನು ನಿರ್ವಹಿಸಬೇಕು. 5-6 ರಂದು ಸೆಸ್ಕ್‍ನಿಂದ ಯಾವುದೇ ರೀತಿ ವಿದ್ಯುತ್ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದರು.
ರಾಷ್ಟ್ರಪತಿಗಳು ಕೊಡಗು ಜಿಲ್ಲೆಯ ತಲಕಾವೇರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಫೆ.5 ಮತ್ತು 6 ರಂದು ತಲಕಾವೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.
ಈ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಡಳಿತ ಕೋರಿದೆ.
ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವೈದ್ಯಕೀಯ ಅಗತ್ಯ ಉಪಕರಣಗಳನ್ನು ಮತ್ತು ರಕ್ತ ನಿಧಿ ಕೇಂದ್ರದಲ್ಲಿ ರಕ್ತದ ಪೂರೈಕೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು
ಅಂತರ್ಜಾಲ, ಟೆಲಿಪೆÇೀನ್, ವ್ಯವಸ್ಥೆಗೆ ಸಂಬಂಧಿಸಿದಂತೆ 2 ದಿನಗಳ ಮುಂಚೆಯೇ ವ್ಯವಸ್ಥೆ ಮಾಡಿಕೊಳ್ಳುವಂತೆ ಬಿಎಸ್‍ಎನ್‍ಎಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಸುದರ್ಶನ ಅತಿಥಿ ಗೃಹದಲ್ಲಿ ಕೋವಿಡ್ ನಿಯಮಪಾಲನೆಯಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು 5-6 ರಂದು ನಿಗಧಿತ ಸಮಯದಲ್ಲಿ ತೆರೆಯಲು ಅವಕಾಶವನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯವರು ಹೆಲಿಪ್ಯಾಡ್ ಗಳಲ್ಲಿ ಸೂಕ್ತ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸಬೇಕು. ತಲಕಾವೇರಿ ಸಾರ್ವಜನಿಕ ಪ್ರವೇಶಕ್ಕೆ 5-6 ರಂದು ನಿμÉೀಧಿಸಲಾಗಿದ್ದು ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸಲು ಕೋರಿದರು.
ಪೆÇ್ರೀಟೋಕಾಲ್ ಪ್ರಕಾರ ಕ್ರಮಬದ್ದವಾಗಿ ಕಾರ್ಯಗತಗೊಳಿಸಲು ಸೂಚಿಸಿದರು. ಎಲ್ಲಾ ವಾಹನಗಳು, ಗ್ರೀನ್ ರೂಮ್ ಗಳು ಸ್ಯಾನಟೈಸ್ ಆಗಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ, ಐಟಿಡಿಪಿ ಅಧಿಕಾರಿ ಶಿವಕುಮಾರ್, ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ, ಪಿಡಬ್ಲ್ಯುಡಿ ಇಲಾಖೆ ಎಇಇ ಶಿವರಾಮ್, ನಗರಾಭಿವೃದ್ಧಿ ಯೋಜನಾ ಕೋಶದ ರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಬಿಂದುಶ್ರೀ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್, ಕೊಡಗು ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಕಾರ್ಯಪ್ಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಆಹಾರ ಇಲಾಖೆ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ತಾ.ಪಂ.ಇಒ ಲಕ್ಷ್ಮೀ, ತಹಶೀಲ್ದಾರ್ ಮಹೇಶ್ ಅವರು ಹಲವು ಮಾಹಿತಿ ನೀಡಿದರು.

error: Content is protected !!