ರಾಷ್ಟ್ರಪತಿ ಕೊಡಗು ಭೇಟಿ ಹಿನ್ನೆಲೆ : ವಿವಿಧ ಸ್ಥಳ ಪರಿಶೀಲನೆ

January 29, 2021

ಮಡಿಕೇರಿ ಜ.29 : ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ತಹಶೀಲ್ದಾರ್ ಮಹೇಶ್, ಡಿವೈಎಸ್‍ಪಿ ದಿನೇಶ್ ಕುಮಾರ್, ಇತರರು ಶುಕ್ರವಾರ ನಗರದ ಎಫ್‍ಎಂಸಿ ಕಾಲೇಜು ಮೈದಾನ, ಭಾಗಮಂಡಲ, ತಲಕಾವೇರಿ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲಿಸಿದರು.
ಮಾನ್ಯ ರಾಷ್ಟ್ರಪತಿ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಸೂಕ್ತ ಬಂದೋಬಸ್ತ್ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು, ಮಾನ್ಯ ರಾಷ್ಟ್ರಪತಿ ಭೇಟಿ ಹಿನ್ನೆಲೆ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ರಾಷ್ಟ್ರಪತಿ ಭವನದ ಮಾರ್ಗಸೂಚಿಯಂತೆ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.

error: Content is protected !!