ಟಿ.ಎಸ್.ನಾಗಾಭರಣರನ್ನು ಸನ್ಮಾನಿಸಿ ಗೌರವಿಸಿದ ಕೊಡಗು ಕನ್ನಡ ಜಾಗೃತಿ ಸಮಿತಿ

January 29, 2021

ಮಡಿಕೇರಿ ಜ.29 : ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ, ಸಾಹಿತಿ, ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಅವರನ್ನು ಕನ್ನಡ ಜಾಗೃತಿ ಸಮಿತಿ ಪದಾಧಿಕಾರಿಗಳು ಮಡಿಕೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಅಭಿಯಾನ ಮತ್ತು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಲಹೆ ಸೂಚನೆ ನೀಡಿದ ನಾಗಾಭರಣ ಅವರು ಗಡಿ ಗ್ರಾಮಗಳಲ್ಲೂ ಕನ್ನಡ ಕಾರ್ಯಕ್ರಮಗಳ ಅನುಷ್ಟಾನದ ಕುರಿತು ಭರವಸೆಯ ಮಾತುಗಳನ್ನಾಡಿದರು.
ಈ ಸಂದರ್ಭ ಜಾಗೃತಿ ಸಮಿತಿಯ ಪ್ರಮುಖರಾದ ಎಸ್.ಮಹೇಶ್, ವಿರಾಜಪೇಟೆಯ ರಂಜಿತಾ ಕಾರ್ಯಪ್ಪ, ಕಾಜೂರು ಸತೀಶ, ಕುಶಾಲನಗರದ ಇ.ರಾಜು, ಭಾರತಿ ರಮೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ದರ್ಶನ ಉಪಸ್ಥಿತರಿದ್ದರು.

error: Content is protected !!