ಸಾಹಿತ್ಯ ಸಮ್ಮೇಳನದಲ್ಲಿ ವಾರಿಯರ್ಸ್‍ಗಳಿಗೆ ಸನ್ಮಾನ : ಇಂಗ್ಲೀಷ್ ವ್ಯಾಮೋಹಕ್ಕೆ ಬಲಿಯಾಗದೆ ಕನ್ನಡಕ್ಕೆ ಆದ್ಯತೆ ನೀಡಿ : ಶಾಸಕ ಅಪ್ಪಚ್ಚುರಂಜನ್ ಕರೆ

30/01/2021

ಮಡಿಕೇರಿ ಜ.30 : ಇಂಗ್ಲೀಷ್ ಭಾಷೆಯ ವ್ಯಾಮೋಹಕ್ಕೆ ಬಲಿಯಾಗದೆ ಮಾತೃಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ‘ಕನ್ನಡ’ದ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಹಾರಿಸಲು ಮುಂದಾಗಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದರು.
ಕೊಡಗು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಜಿಲ್ಲಾ ಕಸಾಪ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಕೊರೊನಾ ವಾರಿಯರ್ಸ್‍ಗಳನ್ನು ಸನ್ಮಾನಿಸಿ ಮಾತನಾಡಿ, ನೆರೆಯ ತಮಿಳುನಾಡಿನಲ್ಲಿ ಅಲ್ಲಿನ ಜನತೆ ತಮ್ಮ ಮಾತೃಭಾಷೆಗೆ ಹೆಚ್ಚಿನ ಒತ್ತು ನೀಡುತ್ತಾರಾದರೆ, ಬಹುತೇಕ ಭಾಷಿಕರು ತಮ್ಮ ಭಾಷೆಯತ್ತ ವಿಶೇಷ ಒಲವನ್ನು ತೋರುವುದನ್ನು ಕಾಣುತ್ತೇವೆ. ಹೀಗಿದ್ದೂ ಕನ್ನಡಿಗರು ಇಂಗ್ಲೀಷ್ ಭಾಷೆಗೆ ಮಹತ್ವ ನೀಡುತ್ತಿರುವ ವೈಫರೀತ್ಯ ನಮ್ಮ ಮುಂದಿದೆಯೆಂದು ವಿಷಾದ ವ್ಯಕ್ತಪಡಿಸಿ, ಈ ನೆಲದ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸಕ್ಕೆ ಪ್ರತಿಯೊಬ್ಬರು ಒತ್ತು ನೀಡಬೇಕೆಂದು ಕರೆ ನೀಡಿದರು.
ಕೊರೊನಾ ಸಂಕ್ರಮಣ ಕಾಲದಲ್ಲಿ ಸೋಂಕಿಗೆ ಒಳಗಾದ ಮಂದಿಯನ್ನು ಅವರ ಕುಟುಂಬಸ್ಥರೇ ನೋಡಲಾಗದ, ಸೋಂಕಿನಿಂದ ಕೊನೆಯುಸಿರೆಳೆÉದವರ ಅಂತ್ಯಸಂಸ್ಕಾರದಲ್ಲಿ ಅವರ ಮನೆಯವರೆ ಪಾಲ್ಗೊಳ್ಳಲು ಸಾಧ್ಯವಾಗದ ಸಂಕಷ್ಟದ ಪರಿಸ್ಥಿತಿಗಳನ್ನು ಕಂಡಿದ್ದೇವೆ. ಇಂತಹ ದುರ್ಬರ ಪರಿಸ್ಥಿತಿಗಳ ನಡುವೆಯೂ ಸೇವಾ ಮನೋಭಾವನೆಯಿಂದ ಸೋಂಕಿಗೆ ಒಳಗಾದವನ ನೋವಿಗೆ ಸ್ಪಂದಿಸಿದ, ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನೆರವೇರಿಸಲು ಶ್ರಮಿಸಿದ ಕೊರೊನಾ ವಾರಿಯರ್ಸ್‍ಗಳ ಸೇವೆ ಅತ್ಯಪೂರ್ವ. ಅಂತಹ ಕೊರೊನಾ ವಾರಿಯರ್ಸ್‍ಗಳನ್ನು ಕನ್ನಡ ಸಮ್ಮೇಳನದಲ್ಲಿ ಸನ್ಮಾನಿಸುತ್ತಿರುವ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸೋಮವಾರಪೇಟೆ ತಾಪಂ ಉಪಾಧ್ಯಕ್ಷರಾದ ಅಭಿಮನ್ಯು ಕುಮಾರ್ ಮಾತನಾಡಿ, ಕನ್ನಡ ಭಾಷೆ ಶ್ರೀಮಂತವಾಗಿ ಬೆಳೆÉಯಬೇಕಾದರೆ, ಅದರ ಉಪಭಾಷೆಗಳನ್ನು ಬೆಳೆÉಸುವ ಕೆಲಸವಾಗಬೇಕೆಂದು ಅಭಿಪ್ರಾಯಿಸಿದರು.
ಪ್ರಸ್ತುತ ಸನ್ನಿವೇಶದಲ್ಲಿ ಯುವ ಸಮೂಹ ಸಾಹಿತ್ಯದ ಅಧ್ಯಯನ, ಓದಿನಿಂದ ವಿಮುಖರಾಗಿ ಮೊಬೈಲ್‍ಗಳ ನಡುವೆ ಮುಳುಗಿ ಹೋಗುತ್ತಿದ್ದಾರೆ. ಈ ಹಿನ್ನೆಲೆ ಅವರಲ್ಲಿ ಸಾಹಿತ್ಯದ ಆಸಕ್ತಿಯನ್ನು ಬಿತ್ತಿ, ಬರೆಯುವ ಚಿಂತನೆಗಳನ್ನು ಮೂಡಿಸುವ ಕೆಲಸವಾಗಬೇಕೆಂದು ಅಭಿಪ್ರಾಯಿಸಿದರು.
ಸನ್ಮಾನ-ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಎಪ್ಪತ್ತೈದಕ್ಕೂ ಹೆಚ್ಚಿನ ಮಂದಿಯನ್ನು ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ- ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎಂ.ಎಸ್. ಪೂವಯ್ಯ, ಎಸ್.ಸಿ. ರಾಜಶೇಖರ್, ಟಿ.ಪಿ. ರಮೇಶ್, ಮಡಿಕೆÉೀರಿ ತಾಲ್ಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೆ.ಟಿ. ಬೇಬಿ ಮ್ಯಾಥ್ಯು, ಮುನೀರ್ ಅಹಮ್ಮದ್, ಕುಡೆಕಲ್ ಸಂತೋಷ್, ಸೋಮವಾರಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷರಾಗಿದ್ದ ಜೆ.ಸಿ.ಶೇಖರ್, ಪ್ರೇಮ್ ಕುಮಾರ್, ಎಸ್.ಡಿ. ವಿಜೇತ ಮತ್ತು ಹೆಚ್.ಜೆ.ಜವರಪ್ಪ ಅವರನ್ನು ಹಾಗೂ ವಿರಾಜಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷರಾಗಿದ್ದ ಡಾ.ಜೆ.ಸೋಮಣ್ಣ, ಕೇಶವ ಕಾಮತ್ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರನ್ನು, ಹೋಬಳಿ ಘಟಕಗಳಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಜಿಲ್ಲಾ ಕಸಾಪ ಅಧ್ಯಕ್ಷರಾದ ಲೋಕೇಶ್ ಸಾಗರ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ್. ಕುಶಾಲನಗರದ ಕಲಾ ಶಿಕ್ಷಕರಾದ ಉ.ರಾ.ನಾಗೇಶ್ ಸೇರಿದಂತೆ ಹಲ ಗಣ್ಯರು ಪಾಲ್ಗೊಂಡಿದ್ದರು.