ಸ್ವಚ್ಛ ಭಾರತ್ ಮಿಷನ್ ಕುರಿತು ಮಡಿಕೇರಿಯಲ್ಲಿ ಕಾರ್ಯಾಗಾರ

30/01/2021

ಮಡಿಕೇರಿ ಜ.30 : ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮೀಷನ್ ಯೋಜನೆಯಡಿ ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಾಗಾರ ನಡೆಯಿತು.
ಸ್ವಚ್ಛ ಭಾರತ್ ಮಿಷನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಬಗ್ಗೆ ಮಾಹಿತಿ ನೀಡಲಾಯಿತು. ಜಿ.ಪಂ. ಉಪ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಮುಖ್ಯ ಲೆಕ್ಕಾಧಿಕಾರಿ ಪುಷ್ಪಾವತಿ, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ಸ್ವಚ್ಛ ಭಾರತ್ ಮಿಷನ್ ಸಮಾಲೋಚಕರು ಇತರರು ಇದ್ದರು.