ಮಡಿಕೇರಿ ನಗರಸಭೆ ವಾರ್ಡ್‍ವಾರು ಮೀಸಲಾತಿ ಕರಡು ಅಧಿಸೂಚನೆ ಪ್ರಕಟ : ಆಕ್ಷೇಪಣೆಗೆ ಅವಕಾಶ

January 30, 2021

ಮಡಿಕೇರಿ ಜ.30 : ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಗೆ ನಿಗಧಿಪಡಿಸಲಾಗಿರುವ ವಾರ್ಡ್‍ವಾರು ಮೀಸಲಾತಿಯ ಕರಡು ಅಧಿಸೂಚನೆ ಪ್ರತಿಯನ್ನು ನಗರಸಭೆ ಕಚೇರಿ, ಮಡಿಕೇರಿ ತಾಲ್ಲೂಕು ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅವಗಾಹನೆಗೆ ಪ್ರಚಾರ ಪಡಿಸಲಾಗಿದೆ.
ಈ ಸಂಬಂಧ ಕರಡು ಅಧಿಸೂಚನೆಗೆ ಯಾವುದೇ ಆಕ್ಷೇಪಣೆ ಸಲ್ಲಿಸಲು ಇಚ್ಚಿಸುವ ವ್ಯಕ್ತಿಗಳು ಲಿಖಿತವಾಗಿ ಕಾರಣ ಸಹಿತ ದಾಖಲೆಗಳೊಂದಿಗೆ ಫೆಬ್ರವರಿ, 05 ರೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!