ಗದ್ದೆಹಳ್ಳದ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ

February 1, 2021

ಮಡಿಕೇರಿ ಫೆ. 1 : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಸುಂಟಿಕೊಪ್ಪದ ಗದ್ದೆಹಳ್ಳದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಗದ್ದೆಹಳ್ಳದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿತ ಸರಳ ಕಾರ್ಯಕ್ರಮವನ್ನು ಪಂಚಾಯಿತಿ ಸದಸ್ಯರುಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭ ಉಲುಗುಲಿ 4ನೇ ವಿಭಾಗದ ಸದಸ್ಯರುಗಳಾದ ಪಿ.ಆರ್.ಸುನಿಲ್ ಕುಮಾರ್, ನಾಗರತ್ನ ಸುರೇಶ್, ಮಂಜುಳ(ರಾಸಥಿ),ಗೀತಾ ಮಾಜಿ ಗ್ರಾ.ಪಂ.ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಅಂಗನವಾಡಿ ಕಾರ್ಯಕರ್ತೆಯಾರಾದ ಲಕ್ಷ್ಮಿರಾಕೇಶ್, ವಿಜಯ, ಆಶಾ ಕಾರ್ಯಕರ್ತೆಯರಾದ ಜ್ಯೋತಿ ಲಕ್ಷ್ಮೀ, ಗೀತಾ ವಿಶ್ವನಾಥ್ ಹಾಗೂ ಗ್ರಾಮಸ್ಥರು ಇದ್ದರು.

error: Content is protected !!