ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

01/02/2021

ಮಡಿಕೇರಿ ಫೆ.1 : ಪ್ರಸಕ್ತ (2020-21) ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ರೂ.2.50ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ರೂ.1.00 ಲಕ್ಷ ಒಳಗಿರಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ, 10 ಕೊನೆಯ ದಿನವಾಗಿದೆ.
ವಿವರಗಳಿಗೆ ಇಲಾಖಾ ವೆಬ್‍ಸೈಟ್ www.bcwd.karnataka.gov.in ಅನ್ನು ನೋಡುವುದು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಹಾಯವಾಣಿ ದೂ.ಸಂ.080-8050370006 ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಮಡಿಕೇರಿ ತಾಲ್ಲೂಕು ಕಚೇರಿ 08272-298037, ವಿರಾಜಪೇಟೆ ತಾಲ್ಲೂಕು ಕಚೇರಿ 08274-249211, ಸೋಮವಾರಪೇಟೆ ತಾಲ್ಲೂಕು ಕಚೇರಿ 08272-284820, ಜಿಲ್ಲಾ ಕಚೇರಿ 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜ ಅವರು ತಿಳಿಸಿದ್ದಾರೆ.