ಕೊಡಗು ಕಾಂಗ್ರೆಸ್‍ನಿಂದ ಮಡಿಕೇರಿಯಲ್ಲಿ ಹುತಾತ್ಮರ ದಿನಾಚರಣೆ

February 2, 2021

ಮಡಿಕೇರಿ ಫೆ. 2 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಹುತಾತ್ಮರ ದಿನಾಚರಣೆ ನಡೆಯಿತು .

ನಗರದ ಅಂಬೇಡ್ಕರ್ ಭವನದಲ್ಲಿ ಮಹಾತ್ಮಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ. ಕೆ. ಮಂಜುನಾಥ್ ಕುಮಾರ್ , ವಿಶ್ವ ಕಂಡ ಮಹಾನ್ ಸಂತ ಮಹಾತ್ಮ ಗಾಂಧಿಯವರು ಜಗತ್ತಿನ ಮಾನವ ಕುಲಕ್ಕೆ ಆದರ್ಶಪ್ರಾಯವಾಗಿದ್ದಾರೆ ಎಂದು ಬಣ್ಣಿಸಿದರು.

ಇಂತಹ ಮಹಾನ್ ಚೇತನ ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದು, ದೇಶದ ಬಹು ದೊಡ್ಡ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ ಸದಸ್ಯೆ ಕೆ. ಪಿ. ಚಂದ್ರಕಲಾ, ಕೆಪಿಸಿಸಿ ಸಂಯೋಜಕ ಹೆಚ್. ಎಂ. ನಂದಕುಮಾರ್ , ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ. ಪಿ. ಸುರೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ದೇವಾಲಯ ಸಮಿತಿ ಅಧ್ಯಕ್ಷ ಪುಲಿಯಂಡ ಜಗದೀಶ್ , ಡಿಸಿಸಿ ಸದಸ್ಯರಾದ ಪ್ರಕಾಶ್ ಆಚಾರ್ಯ, ಪುಷ್ಷ ಪೂಣಚ್ಚ , ಗೀತಾ ಧರ್ಮಪ್ಪ ,ಯುವ ಕಾಂಗ್ರೆಸ್ ಅಧ್ಯಕ್ಷ ಸದಾ ಮುದ್ದಪ್ಪ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭುರೈ , ಹಿಂದುಳಿದ ಘಟಕದ ಅಧ್ಯಕ್ಷ ಜೆ. ಸಿ. ಜಗದೀಶ್ , ಎಸ್. ಸಿ. ಘಟಕದ ಅಧ್ಯಕ್ಷ ಮುದ್ದುರಾಜ್ , ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್ , ಮಹಿಳಾ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ , ಬ್ಲಾಕ್ ಸಂಘಟನಾ ಕಾರ್ಯದರ್ಶಿ ಮುನೀರ್ ಮಾಚರ್, ಪಧಾಧಿಕಾರಿಗಳಾದ ರಿಯಾಜ್, ರವಿಗೌಡ , ಮುಮ್ತಾಜ್ ಬೇಗಂ , ಸೇರಿದಂತೆ ಪ್ರಮುಖರು ಹಾಜರಿದ್ದರು .
ನಂತರ ಮಡಿಕೇರಿ ನಗರ ಸಭೆ ಚುಣಾವಣೆಗೆ ಸಂಭಂದಿಸಿದಂತೆ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಿತು. ಫೆಬ್ರವರಿ 6 ರ ಒಳಗಾಗಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಯಿತು.

error: Content is protected !!