ಫೆ.5 ಮತ್ತು 6 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

February 2, 2021

ಮಡಿಕೇರಿ ಫೆ. 2 : ಮಾನ್ಯ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಫೆಬ್ರವರಿ, 5 ಮತ್ತು 6 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಫೆಬ್ರವರಿ, 05 ರಂದು ಬೆಳಗ್ಗೆ 11.30 ಗಂಟೆಗೆ ಭಾಗಮಂಡಲದಲ್ಲಿ ಘನವೆತ್ತ ಭಾರತದ ರಾಷ್ಟ್ರಪತಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮತ್ತು ಸಭೆ ನಡೆಸಲಿದ್ದಾರೆ.
ಫೆಬ್ರವರಿ, 06 ರಂದು ಬೆಳಗ್ಗೆ 11.25 ಗಂಟೆಗೆ ತಲಕಾವೇರಿಯ ಹೆಲಿಪ್ಯಾಡ್‍ನಲ್ಲಿ ಘನವೆತ್ತ ಭಾರತದ ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ನಂತರ ಮಾನ್ಯ ರಾಷ್ಟ್ರಪತಿ ಅವರೊಂದಿಗೆ ಜಿಲ್ಲೆಯ ವಿವಿಧ ಕಾರ್ಯಕ್ರಮ/ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್.ರವಿಪ್ರಕಾಶ್ ಅವರು ತಿಳಿಸಿದ್ದಾರೆ.

error: Content is protected !!