ಫೆ. 8 ಮತ್ತು 11 ರಂದು ಕೊಡಗಿನ ವಿವಿಧೆಡೆ ಅಹವಾಲು ಸ್ವೀಕಾರ ಸಭೆ

02/02/2021

ಮಡಿಕೇರಿ ಫೆ. 2 : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಫೆ. 8 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಕುಶಾಲನಗರ ನಾಡ ಕಚೇರಿ, ಮಧ್ಯಾಹ್ನ 01 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸೋಮವಾರಪೇಟೆ ತಾಲ್ಲೂಕು ಕಚೇರಿ, ಮಧ್ಯಾಹ್ನ 3.30 ರಿಂದ 4.30 ಗಂಟೆಯವರೆಗೆ ಶನಿವಾರಸಂತೆ ನಾಡ ಕಚೇರಿ, ಫೆಬ್ರವರಿ, 11 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಿದ್ದಾಪುರ ಗ್ರಾಮ ಪಂಚಾಯಿತಿ ಕಟ್ಟಡ ಸಭಾಂಗಣದಲ್ಲಿ, ಮಧ್ಯಾಹ್ನ 12.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿರಾಜಪೇಟೆ ಪಟ್ಟಣ ಪಂಚಾಯಿತಿ ಕಟ್ಟಡ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.
ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ-571201, ದೂ.ಸಂ 08272-222100, 9480806281 ಮತ್ತು 9480806282 ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಠಾಣೆಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.