ಕನ್ನಡ ಪುಸ್ತಕಗಳನ್ನು ಖರೀದಿಸಲು ಅರ್ಜಿ ಆಹ್ವಾನ

February 2, 2021

ಮಡಿಕೇರಿ ಫೆ.2 : ಕನ್ನಡ ಪುಸ್ತಕ ಪ್ರಾಧಿಕಾರವು 2017ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಫೆಬ್ರವರಿ, 27 ವರೆಗೆ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ಮೂಲಕ ಹಾಗೂ ಬೆಂಗಳೂರಿನಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ಮತ್ತು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಕಚೇರಿ ವೇಳೆಯಲ್ಲಿ ಉಚಿತವಾಗಿ, ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ. ಎರಡು ಪುಸ್ತಕಗಳ ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560 002 ಅವರಿಗೆ ಫೆಬ್ರವರಿ, 27 ರೊಳಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು. ವೆಬ್‍ಸೈಟ್ www.kannadapustakapradhikara.com, ದೂ.ಸಂ.080-22484516 / 22017704 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!