Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:53 AM Friday 22-October 2021

ಮಡಿಕೇರಿಯಲ್ಲಿ ಫೆ.6 ರಂದು ಅಂಗಡಿ, ಮುಂಗಟ್ಟುಗಳನ್ನು ಸಂಜೆ 5 ಗಂಟೆವರೆಗೆ ಮುಚ್ಚಬೇಕಿದೆ

03/02/2021

ಮಡಿಕೇರಿ ಫೆ.3 : ವೀರಸೇನಾನಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಫೆ.6 ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಅಂದು ಬೆಳಗ್ಗೆ 10.55 ಗಂಟೆಗೆ ಭಾಗಮಂಡಲ ಕಾವೇರಿ ಕಾಲೇಜಿನ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಆದ್ದರಿಂದ ಭಾಗಮಂಡಲದ ಕಾವೇರಿ ಕಾಲೇಜಿನಿಂದ ತಲಕಾವೇರಿ ಮಾರ್ಗದಲ್ಲಿನ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮುಚ್ಚಬೇಕಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸ್ಪಷ್ಟಪಡಿಸಿದ್ದಾರೆ.
ಹಾಗೆಯೇ ರಾಷ್ಟ್ರಪತಿ ಅವರು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದ ಹೆಲಿಪ್ಯಾಡ್‍ಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಲಿರುವ ಹಿನ್ನೆಲೆ ಕ್ಲಬ್ ಮಹೀಂದ್ರದಿಂದ ಕಾರ್ಯಪ್ಪ ಕಾಲೇಜು, ಸಾಯಿ ರಸ್ತೆ, ರಾಜಾಸೀಟು ರಸ್ತೆ, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ಸ್ಮಾರಕ ಭವನ ತಲುಪಲಿರುವ ಹಿನ್ನೆಲೆ, ಈ ಮಾರ್ಗದ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮುಚ್ಚಬೇಕಿದೆ. ಜೊತೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದವರೆಗೆ ಫೆ.6 ರಂದು ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆಯವರೆಗೆ ರಸ್ತೆ ಸಂಚಾರ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರಪತಿಗಳು ತಲಕಾವೇರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಫೆ.5 ಮತ್ತು 6 ರಂದು ಭಾಗಮಂಡಲ ದೇವಾಲಯ ಮತ್ತು ತಲಕಾವೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.