ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 91

03/02/2021

ಮಡಿಕೇರಿ ಫೆ.3 : ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6084 ಆಗಿದ್ದು, 5912 ಮಂದಿ ಗುಣಮುಖರಾಗಿದ್ದಾರೆ. 91 ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 30 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬುಧವಾರ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 5 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್‍ಟಿಪಿಸಿಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.