ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 86

February 4, 2021

ಮಡಿಕೇರಿ ಫೆ.4 : ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6085 ಆಗಿದ್ದು, 5918 ಮಂದಿ ಗುಣಮುಖರಾಗಿದ್ದಾರೆ. 86 ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 29 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ 1 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!