ತೀರ್ಥಯಾತ್ರಾ ತಾಣಗಳ ಪೈಕಿ ಒಂದೆನಿಸಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯ

February 4, 2021

ಮೂಕಾಂಬಿಕಾ ದೇವಿಗೆ ಸಮರ್ಪಿಸಲಾದ ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು ಭಾರತದ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರಿಗೆ ಸಂಬಂಧಿಸಿದಂತಿರುವ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದೆನಿಸಿದೆ. ಸೌಪರ್ಣಿಕಾ ನದಿಯ ದಂಡೆಗಳು ಮತ್ತು ಸೊಂಪಾಗಿ ರಸಭರಿತವಾಗಿರುವ ಹಸಿರು ಹುಲ್ಲಿನಿಂದಾವೃತವಾದ ಕೊಡಚಾದ್ರಿ ಬೆಟ್ಟದಿಂದ ಸಾದರಪಡಿಸಲ್ಪಟ್ಟಿರುವ ಚಿತ್ರಸದೃಶ ಪರಿಸರದಲ್ಲಿ, ಮಂಗಳೂರಿನಿಂದ ೧೪೭ ಕಿ.ಮೀ.ಗಳಷ್ಟು ಅಂತರದಲ್ಲಿ ನೆಲೆಗೊಂಡಿರುವ ಈ ದೇವಸ್ಥಾನವು ಪ್ರತಿವರ್ಷವೂ ಲಕ್ಷಗಟ್ಟಲೆ ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ. ಪೂಜ್ಯಭಾವನೆಯಿಂದ ಕಾಣಲ್ಪಡುವ ಹಿಂದೂ ಸಂತ ಮತ್ತು ವೈದಿಕ ವಿದ್ವಾಂಸ ಆದಿ ಶಂಕರರೊಂದಿಗೆ ಈ ದೇವಸ್ಥಾನವು ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿರುವುದರಿಂದ, ಭಕ್ತ-ಸಮುದಾಯಕ್ಕೆ ಸಂಬಂಧಿಸಿದಂತೆ ಇದು ಅಗಾಧವಾದ ಪ್ರಸ್ತುತತೆಯನ್ನು ಹೊಂದಿದೆ. ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಿಯ ದೇವಸ್ಥಾನವೊಂದನ್ನು ಸ್ಥಾಪಿಸುವ ಪರಿಕಲ್ಪನೆಯನ್ನು ಆದಿ ಶಂಕರರು ಗ್ರಹಿಸಿದರು ಮತ್ತು ಸುಮಾರು ೧೨೦೦ ವರ್ಷಗಳಷ್ಟು ಹಿಂದೆಯೇ ದೇವಸ್ಥಾನದಲ್ಲಿ ದೇವತೆಯ ವಿಗ್ರಹವನ್ನು ಪ್ರತಿಷ್ಠಾಪಿಸಿದರು ಎಂದು ನಂಬಲಾಗಿದೆ.

ಮೂಕಾಂಬಿಕಾ ದೇವತೆಯು ಶಕ್ತಿ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವಿರ್ಭವಿಸುವಿಕೆ ಅಥವಾ ಅವತಾರ ಎಂಬುದಾಗಿ ಪರಿಗಣಿಸಲ್ಪಟ್ಟಿರುವುದರಿಂದ, ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಜನರು ಅತೀವವಾದ ನಂಬಿಕೆಯನ್ನು ಇರಿಸಿಕೊಂಡಿದ್ದಾರೆ. ವಾಸ್ತವವಾಗಿ ಹೇಳಬೇಕೆಂದರೆ, ಮೂಕಾಂಬಿಕಾ ದೇವಿಯ ದೇವಸ್ಥಾನವು ಕರ್ನಾಟಕದಲ್ಲಿನ ‘ಸಪ್ತ ಮುಕ್ತಿಸ್ಥಳ’ ತೀರ್ಥಯಾತ್ರಾ ತಾಣಗಳ ಪೈಕಿ ಒಂದೆನಿಸಿದೆ. ಆ ತಾಣಗಳೆಂದರೆ: ಕೊಲ್ಲೂರು, ಉಡುಪಿ, ಸುಬ್ರಮಣ್ಯ, ಕುಂಬಾಶಿ, ಕೋಟೇಶ್ವರ, ಶಂಕರನಾರಾಯಣ ಮತ್ತು ಗೋಕರ್ಣ.

ಕೊಡಚಾದ್ರಿ ಶಿಖರದ ತಪ್ಪಲು ಪ್ರದೇಶದಲ್ಲಿ ಮೂಕಾಂಬಿಕಾ ದೇವಿಯ ದೇವಸ್ಥಾನವು ನೆಲೆಗೊಂಡಿದೆ. ಶಿವ ಮತ್ತು ಶಕ್ತಿ ಈ ಇಬ್ಬರನ್ನೂ ಸಂಯೋಜಿಸಿರುವ ಜ್ಯೋತಿರ್ಲಿಂಗದ ಸ್ವರೂಪದಲ್ಲಿ ಈ ದೇವತೆಯು ಕಂಡುಬರುತ್ತಾಳೆ. ಶ್ರೀಚಕ್ರದ ಮೇಲೆ ಸ್ಥಾಪಿಸಲಾಗಿರುವ ದೇವತೆಯ ಪಂಚಲೋಹ ದ (ಐದು ಧಾತುಗಳನ್ನು ಬೆರೆಸಿದ ಲೋಹದ) ವಿಗ್ರಹವನ್ನು ಆದಿ ಶಂಕರಾಚಾರ್ಯರು ಈ ಸ್ಥಳಕ್ಕೆ ತಾವು ಭೇಟಿನೀಡಿದ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದರು ಎಂದು ಹೇಳಲಾಗುತ್ತದೆ. ದೇವತೆಯ ಮೂಲಸ್ಥಳವು ಕೊಡಚಾದ್ರಿ ಶಿಖರದ ತುದಿಯ (೩೮೮೦’) ಮೇಲಿದೆ ಎಂಬುದಾಗಿಯೂ ಮತ್ತು ಕೊಡಚಾದ್ರಿಯನ್ನು ಸಂಪೂರ್ಣವಾಗಿ ಚಾರಣಮಾಡಿಕೊಂಡು ಮೂಲಸ್ಥಳವನ್ನು ತಲುಪುವುದು ಸಾಮಾನ್ಯ ಜನರಿಗೆ ಅತ್ಯಂತ ಕಷ್ಟಕರವಾಗಿದ್ದರಿಂದ, ಶಂಕರಾಚಾರ್ಯರು ದೇವಸ್ಥಾನವನ್ನು ಕೊಲ್ಲೂರಿನಲ್ಲಿ ಪುನರ್‌‌-ಸ್ಥಾಪಿಸಿದರು ಎಂಬುದಾಗಿಯೂ ನಂಬಲಾಗಿದೆ.ಇಲ್ಲಿ ಪಂಚಮುಖಿ ಗಣೇಶನ ಒಂದು ಮನಮೋಹಕ ಶಿಲ್ಪವಿರುವುದನ್ನು ಕಾಣಬಹುದು.

ಕರ್ನಾಟಕದಲ್ಲಿನ ಪರಶುರಾಮ ಕ್ಷೇತ್ರದ ಸಪ್ತ ಮುಕ್ತಿಸ್ಥಳದ ತೀರ್ಥಯಾತ್ರಾ ತಾಣಗಳ ಪೈಕಿ ಒಂದೆಂಬುದಾಗಿ ಕೊಲ್ಲೂರು ಪರಿಗಣಿಸಲ್ಪಟ್ಟಿದೆ. ಆ ತಾಣಗಳೆಂದರೆ: ಕೊಲ್ಲೂರು, ಉಡುಪಿ, ಸುಬ್ರಮಣ್ಯ, ಕುಂಬಾಶಿ, ಕೋಟೇಶ್ವರ, ಶಂಕರನಾರಾಯಣ ಮತ್ತು ಗೋಕರ್ಣ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿರುವ ಇತರ ದೇವತೆಗಳಲ್ಲಿ ಶ್ರೀ ಸುಬ್ರಮಣ್ಯ, ಶ್ರೀ ಪಾರ್ಥೀಶ್ವರ, ಶ್ರೀ ಪಂಚಮುಖ ಗಣಪತಿ, ಶ್ರೀ ಚಂದ್ರಮೌಳೀಶ್ವರ, ಶ್ರೀ ಪ್ರಾಣಲಿಂಗೇಶ್ವರ, ಶ್ರೀ ನಂಜುಂಡೇಶ್ವರ, ಶ್ರೀ ಆಂಜನೇಯ, ಶ್ರೀ ವೆಂಕಟರಮಣ, ಶ್ರೀ ತುಳಸಿ ಗೋಪಾಲಕೃಷ್ಣ ಇವು ಸೇರಿವೆ

ನವೆಂಬರ್‌ನಲ್ಲಿ ನಡೆಯುವ ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ, ದೇವಸ್ಥಾನವು ಭಕ್ತರ ದಟ್ಟಣೆಯಿಂದ ಕೂಡಿರುತ್ತದೆ. ಜನ್ಮಾಷ್ಟಮಿ ಅಥವಾ ಕೃಷ್ಣ ಜಯಂತಿ ಕೂಡ ಇಲ್ಲಿನ ಒಂದು ಜನಪ್ರಿಯ ಉತ್ಸವ ಎನಿಸಿಕೊಂಡಿದೆ. ಈ ದಿನದಂದು ಸ್ವಯಂಭು ಲಿಂಗವು ಕಾಣಿಸಿಕೊಂಡಿತು ಎಂದು ನಂಬಲಾಗಿದೆ.

ನವರಾತ್ರಿ ಉತ್ಸವದ ಕೊನೆಯ ದಿನದಂದು ಇಲ್ಲಿನ ಸರಸ್ವತಿ ಮಂಟಪದಲ್ಲಿ, ಪುಟ್ಟ ಮಕ್ಕಳಿಗೆ ಅವರದೇ ಮಾತೃಭಾಷೆಯ ವರ್ಣಮಾಲೆಯ ಅಕ್ಷರಗಳಲ್ಲಿ ದೀಕ್ಷೆ ಅಥವಾ ಉಪದೇಶವನ್ನು ನೀಡಲಾಗುತ್ತದೆ ಮತ್ತು ಇದು ವಿದ್ಯಾರಂಭದ ದ್ಯೋತಕವಾಗಿರುತ್ತದೆ. ಅದೇನೇ ಇದ್ದರೂ, ಈ ದೇವಸ್ಥಾನದಲ್ಲಿ ಯಾವುದೇ ಸೂಕ್ತವಾದ ದಿನದಂದು ವಿದ್ಯಾರಂಭದ ಕೈಂಕರ್ಯವನ್ನು ನಡೆಸಬಹುದಾಗಿದೆ. ಪ್ರತಿದಿನದ ಮಧ್ಯಾಹ್ನದ ಅವಧಿ ಮತ್ತು ಸಾಯಂಕಾಲಗಳಲ್ಲಿ ಇಲ್ಲಿ ಭಕ್ತರಿಗೆ ಅನ್ನದಾನವನ್ನು ಮಾಡಲಾಗುತ್ತದೆ.