ಶ್ರೀದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮುಂದೂಡಿಕೆ

04/02/2021

ಮಡಿಕೇರಿ ಫೆ.4 : ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಫೆ.5 ಮತ್ತು ಫೆ.6 ರಂದು ನಡೆಯಬೇಕಾಗಿದ್ದ ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವನ್ನು ಮುಂದೂಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಇದೇ ಫೆ.26 ಮತ್ತು 27 ರಂದು ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ಭಕ್ತಾಧಿಗಳು ಸಹಕರಿಸುವಂತೆ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.