ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮಿಥುನ್ ಗೌಡ ಆಯ್ಕೆ

February 4, 2021

ಮಡಿಕೇರಿ ಫೆ. 4 : ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿಥುನ್ ಗೌಡ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಸೋಮವಾರಪೇಟೆ ಹಾನಗನ್ ನಿವಾಸಿಯಾದ ಮಿಥುನ್ ಗೌಡ ಸ್ಪರ್ಧಿಸಿದ್ದರು.
ಆನ್ ಲೈನ್ ಮುಖಾಂತರ ನಡೆದ ಚುನಾವಣೆಯಲ್ಲಿ ಮಿಥುನ್ ಗೌಡ 354 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿಯಾಗಿ ಸ್ಪರ್ಧಿಸಿದ್ದ ಮೈಸಿ ಕತ್ತಣೀರ 292 ಮತಗಳನ್ನು ಪಡೆದು ಪರಾಜಯಗೊಂಡಿದ್ದಾರೆ.
ಕುಶಾಲನಗರ ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಆಯ್ಕೆಯಾಗಿದ್ದು, 194 ಮತಗಳನ್ನು ಜಯಶೀಲರಾಗಿದ್ದಾರೆ. ಪ್ರತಿಸ್ಪರ್ಧಿ ದೇವಪ್ಪ 72 ಮತಗಳನ್ನು ಗಳಿಸಿ ಸೋಲನ್ನು ಅನುಭವಿಸಿದ್ದಾರೆ.
ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟ ಮೈಸಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ, ದೇವಪ್ಪ ಯೂತ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

error: Content is protected !!