ಮೂರ್ನಾಡಿನಲ್ಲಿ ದಾಸ ಸಾಹಿತ್ಯ ಸಮ್ಮೇಳನ : ಪೂರ್ವಭಾವಿ ಸಭೆ

ಮಡಿಕೇರಿ ಫೆ.4; ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಘಟಕ ಹಾಗೂ ಮೂರ್ನಾಡು ಹೋಬಳಿ ಘಟಕದ ಸಹಯೋಗದೊಂದಿಗೆ ಮೂರ್ನಾಡಿನಲ್ಲಿ ದಾಸ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಈ ಸಂಬ0ಧ ಇಂದು ಮೂರ್ನಾಡಿನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ದಾಸ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮೂರ್ನಾಡು ಗ್ರಾ.ಪಂ. ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಕಾರ್ಯಕ್ರಮದ ರೂಪೂರೇಷೆ ಬಗ್ಗೆ ಮಾಹಿತಿ ನೀಡಿದರು. ಒಂದು ದಿನದ ಕಾರ್ಯಕ್ರಮವಾಗಿದ್ದು, ದಾಸ ಸಾಹಿತ್ಯದ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡುವದು, ಯುವ ಪೀಳಿಗೆಯಲ್ಲಿ ಅರಿವು ಮೂಡಿಸುವದು ಕಾರ್ಯಕ್ರಮದ ಉದ್ದೇಶವಾಗಿದೆ, ಮೆರವಣಿಗೆ, ದಾಸರ ಬಗ್ಗೆ ವಿಚಾರಗೋಷ್ಠಿ, ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು. ಈಗಾಗಲೇ ಸೋಮವಾರಪೇಟೆಯಲ್ಲಿ ವಚನ ಸಾಸಹಿತ್ಯ ಸಮ್ಮೇಳನ ನಡೆಸಲಾಗಿದೆ. ಇದೀಗ ದಾಸ ಸಾಹಿತ್ಯದ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಮೂರ್ನಾಡಿನಲ್ಲಿ ದಾಸ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿರುವದಾಗಿ ಹೇಳಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಡಾ.ಸುಭಾಶ್ ನಾಣಯ್ಯ ಅವರು ಕಾರ್ಯಕ್ರಮವನ್ನು ಯಾವ ರೀತಿಯಲ್ಲಿ ನಡೆಸಬೇಕೆಂಬ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಹಾಜರಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ನೂತನವಾಗಿ ಆಗಿರುವ ಜನಪ್ರತಿನಿಧಿಗಳು, ಸಮಾಜ ಸೇವಕರಾದ ಮಹಾಬಲೇಶ್ವರ ಭಟ್, ಪೂರ್ಣಿಮಾ ಬಸಪ್ಪ, ಎಸ್.ಡಿ.ಪ್ರಶಾಂತ್ ಹಾಗೂ ಇತರರು ಹಲವು ಸಲಹೆ ಸೂಚನೆಗಳನ್ನು ನೀಡಿದರು. ಸಮ್ಮೇಳನದ ಅಂಗವಾಗಿ ವಿವಿಧ ಸಮಿತಿಗಳನ್ನು ರಚಿಸುವಂತೆ ತೀರ್ಮಾನಿಸಲಾಯಿತು. ಈ ಸಂಬAಧ ಗ್ರಾಮದ ಪ್ರಮುಖರನ್ನೊಳಗೊಂಡ ಮತ್ತೊಂದು ಸಭೆಯನ್ನು ತಾ. ೬ರಂದು ಮಧ್ಯಾಹ್ನ ೨ ಗಂಟೆಗೆ ನಡೆಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಕಸಾಪ ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ನಿರ್ದೇಶPರುಗಳಾದÀ ಧನಂಜಯ, ಕಿಗ್ಗಾಲು ಗಿರೀಶ್ ಇತರರು ಇದ್ದರು. ಮೂರ್ನಾಡು ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಪಿ.ಎಸ್.ರವಿಕೃಷ್ಣ ಸ್ವಾಗತಿಸಿದರೆ, ಹೋಬಳಿ ಅಧ್ಯಕ್ಷ ಪಿ.ಪಿ.ಸುಕುಮಾರ್ ವಂದಿಸಿದರು.