2500 ವೈದ್ಯರ ನೇಮಕಾತಿ ತಿಂಗಳೊಳಗೆ ಪೂರ್ಣ: ಸಚಿವ ಡಾ.ಕೆ.ಸುಧಾಕರ್ ಭರವಸೆ

February 5, 2021

ಕರ್ನಾಟಕದಲ್ಲಿನ ಜಿಲ್ಲಾಸ್ಪತ್ರೆ ಕೇಂದ್ರ, ತಾಲೂಕು ಆಸ್ಪತ್ರೆ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 1246 ಸಾಮಾನ್ಯ ವೈದ್ಯರು ಹಾಗೂ 824 ತಜ್ಞ ವೈದ್ಯರನ್ನು ಒಂದು ತಿಂಗಳೊಳಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಭರವಸೆ ನೀಡಿದ್ದಾರೆ.

ನಿನ್ನೆಯಷ್ಟೇ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಆರ್ ನರೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಹಳ ವರ್ಷಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ತೀವ್ರವಾಗಿದೆ. ಆದ್ದರಿಂದ ಸಾಮಾನ್ಯ ವೈದ್ಯರು ಹಾಗೂ ತಜ್ಞ ವೈದ್ಯರನ್ನು ನೇರ ನೇಮಕಾತಿ ಮಾಡಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಂದು ಲಕ್ಷ ಜನಸಂಖ್ಯೆಗೆ ಒಂದರಂತಿರುವ ಆಂಬುಲೆನ್ಸ್ ಸೇವೆಯನ್ನು ಮುಂದಿನ ದಿನಗಳಲ್ಲಿ 30 ರಿಂದ 35 ಸಾವಿರಕ್ಕೆ ಒಂದರಂತೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!