ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 101

February 6, 2021

ಮಡಿಕೇರಿ ಫೆ.6 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 8 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6105 ಆಗಿದ್ದು, 5923 ಮಂದಿ ಗುಣಮುಖರಾಗಿದ್ದಾರೆ. 101
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 36 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!