ಪಂಚಮಸಾಲಿ ಮೀಸಲಿಗೆ ಅಧ್ಯಯನ: ಮುಖ್ಯಮಂತ್ರಿ ಸೂಚನೆ

February 6, 2021

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲು ಬೇಡಿಕೆ ಸಂಬಂಧ ಪರಾಮರ್ಶಿಸಿ ಸಮಗ್ರ ಅಧ್ಯಯನ ವರದಿ ನೀಡುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮೀಸಲು ಸಂಬಂಧ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಧಾನಸಭೆಯಲ್ಲಿಈ ಬಗ್ಗೆ ಗಮನ ಸೆಳೆದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಉತ್ತರಿಸಿದ್ದ ಸಿಎಂ ಬಿಎಸ್‌ವೈ ”ತಕ್ಷಣ ಈ ನಿರ್ಧಾರ ಸಾಧ್ಯವಿಲ್ಲ. ಕೇಂದ್ರದ ಸಲಹೆಯೂ ಅಗತ್ಯ” ಎಂದಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ತಕ್ಷಣವೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಟಿಪ್ಪಣಿ ಕಳುಹಿಸಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ”ಕರ್ನಾಟಕ ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದವರು ತಮ್ಮ ಸಮಾಜವು ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಹಿಂದುಳಿದಿದೆ. ಸಮಾಜದ ಕಡು ಬಡವರಿಗೆ ತೊಂದರೆಯಾಗಿದೆ. ಹಾಗಾಗಿ 2ಎ ಮೀಸಲಿಗೆ ಒಳಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಅಧ್ಯಯನ ಕೈಗೊಂಡು ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಬೇಕು” ಎಂದು ನಿರ್ದೇಶನ ನೀಡಿದ್ದಾರೆ.

error: Content is protected !!