ಕೊಡಗು ಜಿಲ್ಲೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

06/02/2021

ಮಡಿಕೇರಿ ಫೆ. 6 : ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಗಮಂಡಲ ಹೆಲಿಪ್ಯಾಡಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು.
ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ. ಸೋಮಣ್ಣ ಅವರು ಸಹ ರಾಷ್ಟ್ರಪತಿಯವರ ಜೊತೆ ಆಗಮಿಸಿದರು.
ಘನತೆವೆತ್ತ ರಾಷ್ಟ್ರಪತಿಯವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.
ರಾಷ್ಟ್ರಪತಿಯವರು ತಲಕಾವೇರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯ ಅರ್ಚಕರಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.

ಪೂಜೆಯ ಬಳಿಕ ಮಡಿಕೇರಿಯ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.