ಫೆ. 8 ರಂದು ಶ್ರೀಕಾವೇರಿ ವಿದ್ಯಾ ಸಂಘ ಆದಿಚುಂಚನಗಿರಿ ಮಹಾ ಸಂಸ್ಥಾನಕ್ಕೆ ಹಸ್ತಾಂತರ

February 6, 2021

ಮಡಿಕೇರಿ ಫೆ.6 : ಭಾಗಮಂಡಲದ ಶ್ರೀಕಾವೇರಿ ವಿದ್ಯಾ ಸಂಘವನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಸುಪರ್ದಿಗೆ ಒಪ್ಪಿಸಲಾಗುತ್ತಿದ್ದು, ಗುರುವಂದನೆ ಮತ್ತು ಸಮರ್ಪಣಾ ಸಮಾರಂಭ ಫೆ.8 ರಂದು ನಡೆಯಲಿದೆ ಎಂದು ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ತಿಳಿಸಿದ್ದಾರೆ.
ಶ್ರೀಡಾ.ನಿರ್ಮಲಾನಂದ ಮಹಾಸ್ವಾಮಿಗಳ ಸಮ್ಮುಖದಲ್ಲಿ ಶ್ರೀಆದಿ ಚುಂಚನಗಿರಿ ಮಠಕ್ಕೆ ವಿದ್ಯಾ ಸಂಘವನ್ನು ಹಸ್ತಾಂತರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಶ್ರೀಕಾವೇರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀ ಡಾ.ನಿರ್ಮಲಾನಂದ ಮಹಾ ಸ್ವಾಮೀಜಿಗಳು ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಆದಿ ಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ಶಂಭುನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ಕೊಂಬಾರನ ಜಿ.ಬೋಪಯ್ಯ ಹಾಗೂ ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಪಾಲ್ಗೊಳ್ಳಲಿದ್ದಾರೆ.
ವಿದ್ಯಾ ಸಂಘದ ಸ್ಥಳ ದಾನಿಗಳಾದ ಚೆದುಕಾರು ಮತ್ತು ಹೊಸಗದ್ದೆ ಕುಟುಂಬದ ಪಟ್ಟೆದಾರರಿಗೆ ಸಮಾರಂಭದಲ್ಲಿ ಗೌರವ ಸಮರ್ಪಣೆ ಮಾಡಲಾಗುವುದು. ಅಲ್ಲದೆ, ಗುರುವಂದನಾ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.

error: Content is protected !!