ಕೊಪ್ಪ ಗ್ರಾ.ಪಂ ಅಧ್ಯಕ್ಷರಾಗಿ ರೇಣುಕ ಸ್ವಾಮಿ, ಉಪಾಧ್ಯಕ್ಷರಾಗಿ ಸಿಂಧು ಆಯ್ಕೆ

February 6, 2021

ಮಡಿಕೇರಿ ಫೆ. 6 : ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರೇಣುಕ ಸ್ವಾಮಿ, ಉಪಾಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಸಿಂಧು ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೈಯದ್ ರಿಯಾಜ್ 11 ಮತ ಪಡೆದರು. ರೇಣುಕಸ್ವಾಮಿ 13 ಮತಗಳನ್ನು ಪಡೆದುಕೊಂಡು ಜಯಶಾಲಿಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದಾಕ್ಷಾಯಿಣಿ 11 ಮತಗಳನ್ನು ಪಡೆದಿದ್ದು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಸಿಂಧು 13 ಮತಗಳನ್ನು ಪಡೆದರು.

error: Content is protected !!