ಮಡಿಕೇರಿ ಅರಣ್ಯ ಭವನದಲ್ಲಿ ಸಭೆ : ವನ್ಯಜೀವಿ ದಾಳಿ ಬಗ್ಗೆ ಮಾಹಿತಿ ಪಡೆದ ಸಚಿವ ಲಿಂಬಾವಳಿ

February 7, 2021

ಮಡಿಕೇರಿ ಫೆ.7 : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ವನ್ಯಜೀವಿಗಳ ಹಾವಳಿ ಕುರಿತು ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ಮಡಿಕೇರಿಯಲ್ಲಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಗೆ ಆಗಮಿಸಿದ ಸಚಿವರು ನಗರದ ಅರಣ್ಯ ಭವನಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಜಿಲ್ಲಾ ಅರಣ್ಯ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಯೋಜನೆಗಳು, ಅದರ ಅನುಷ್ಠಾನ, ವನ್ಯಪ್ರಾಣಿಗಳ ಹಾವಳಿ ತಡೆ ಕುರಿತು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹಿರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್, ಮಹೇಶ್ ಕುಮಾರ್, ವನ್ಯಜೀವಿ ವಿಭಾಗದ ಸಂತೋಷ್ ಬಾಬು, ಸಾಮಾಜಿಕ ಅರಣ್ಯ ವಿಭಾಗದ ಕಾರ್ಯಪ್ಪ, ಚಕ್ರಪಾಣಿ ಮತ್ತಿತರರು ಹಾಜರಿದ್ದರು.

error: Content is protected !!