ಜಾನಪದ ಪರಿಷತ್ ಸೋಮವಾರಪೇಟೆ ತಾಲ್ಲೂಕು ಘಟಕದ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ

February 7, 2021

ಮಡಿಕೇರಿ ಫೆ.7 : ಕರ್ನಾಟಕ ಜಾನಪದ ಪರಿಷತ್ ಸೋಮವಾರಪೇಟೆ ತಾಲ್ಲೂಕು ಘಟಕದ ಸರ್ವ ಸದಸ್ಯರ ಸಭೆ ಕುಶಾಲನಗರದಲ್ಲಿ ನಡೆಯಿತು. ಕುಶಾಲನಗರ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಘಟಕಗಳ ಪುನರ್ ರಚಿಸಲಾಯಿತು.
ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಪ್ರಕಾಶ್ ಮತ್ತು ನೂತನ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಚಂದ್ರಮೋಹನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಘಟಕಗಳ ಪದಾಧಿಕಾರಿಗಳ ಆಯ್ಕೆ ಪೂರ್ಣಗೊಂಡ ಬೆನ್ನಲ್ಲೇ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು, ಜಾನಪದ ನೃತ್ಯ ತರಬೇತಿ ನೀಡುವ ಸಂಬಂಧ ಘಟಕಗಳ ಮೂಲಕ ಒಂದು ದಿನದ ಕಾರ್ಯಾಗಾರ ನಡೆಸಲು ಕಾರ್ಯಯೋಜನೆ ರೂಪಿಸುವಂತೆ ಸೂಚನೆ ನೀಡಿದರು.
ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಸಭೆಯಲ್ಲಿ ಜಾನಪದ ಗೀತೆಗಳÀನ್ನು ಹಾಡಿದರು. ಸೋಮವಾರಪೇಟೆ ತಾಲೂಕು ಘಟಕದ ಕಾರ್ಯದರ್ಶಿ ರುಬೀನಾ ವಂದಿಸಿದರು.
ಜಾನಪದ ಪರಿಷತ್ತು ಮೂಲಕ ಐದು ವರ್ಷಗಳ ಅವಧಿಯಲ್ಲಿ ಉತ್ತಮ ಕಾರ್ಯಚಟುವಟಿಕೆ ಹಮ್ಮಿಕೊಂಡು ಯಶಸ್ಸಿಗೆ ಕಾರಣರಾದ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರನ್ನು ಈ ಸಂದರ್ಭ ತಾಲೂಕುಗಳ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಜಿಲ್ಲಾ ಘಟಕದ ಖಜಾಂಚಿ ಸಂಪತ್‍ಕುಮಾರ್ ಸರಳಾಯ, ಸೋಮವಾರಪೇಟೆ ಹೋಬಳಿ ಘಟಕದ ಅಧ್ಯಕ್ಷ ಎಸ್.ಎ.ಮುರಳೀಧರ್, ವಿಜಯ ಹಾನಗಲ್, ಬಿ.ಸಿ.ಶಂಕ್ರಯ್ಯ, ಪೊನ್ನಚ್ಚನ ಮೋಹನ್, ಹಾ.ತಿ.ಜಯಪ್ರಕಾಶ್, ಸುಜಲಾ ದೇವಿ, ಫ್ಯಾನ್ಸಿ ಮುತ್ತಣ್ಣ, ಸುನಿತಾ ಸಾಗರ್, ವಿನೋದ್ ಸೇರಿದಂತೆ ತಾಲೂಕಿನ ಸೋಮವಾರಪೇಟೆ, ಕುಶಾಲನಗರ ತಾಲೂಕುಗಳ ಸದಸ್ಯರು ಇದ್ದರು.

error: Content is protected !!