ಜೀವನದಲ್ಲಿ ಜಿಗುಪ್ಸೆ : ಕೂಡ್ಲೂರುವಿನಲ್ಲಿ ಶಿಕ್ಷಕ ನೇಣಿಗೆ ಶರಣು

February 8, 2021

ಮಡಿಕೇರಿ ಫೆ. 8 : ಮುಖ್ಯ ಶಿಕ್ಷಕರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೂಡ್ಲೂರುವಿನಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಕೃಷ್ಣನಾಯಕ್ (56) ನೇಣಿಗೆ ಶರಣಾಗಿರುವ ವ್ಯಕ್ತಿ. ಕೊಡಗಿನ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಬಸವನಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆಯಲ್ಲಿದ್ದರು. ಇಂದು ತಮ್ಮ ಮನೆಯ ಹಿಂಬದಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದು. ಕುಶಾಲನಗರ ಗ್ರಾಮಾಂತರ ಪೋಲಿಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!