ಮೊದಲ ಬಾರಿಗೆ ಕಾಂಗ್ರೆಸ್ ಬೆಂಬಲಿತರಿಗೆ ಚೆಂಬು ಗ್ರಾ.ಪಂ ಅಧಿಕಾರ

February 8, 2021

ಮಡಿಕೇರಿ ಫೆ.8 : ಚೆಂಬು ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಸುಮಾ ಯೋಗೀಶ್ವರ್ ಅಧ್ಯಕ್ಷರಾಗಿ, ಶಶಿಕಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಳೆದ 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚೆಂಬು ಗ್ರಾ.ಪಂ ಚುಕ್ಕಾಣಿಯನ್ನು ಕಾಂಗ್ರೆಸ್ ಹಿಡಿದಿದೆ. ನಾಪೆÇೀಕ್ಲು ಬ್ಲಾಕ್ ಕೆಪಿಸಿಸಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯಾಧ್ಯಕ್ಷ ರವಿರಾಜ್ ಹೊಸೂರು, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಜಿಲ್ಲಾ ಕಾಂಗ್ರೆಸ್ ಪ್ರಮುಖರು ಹಾಗೂ ಸ್ಥಳೀಯ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.

error: Content is protected !!