ಗೋ ಸಂರಕ್ಷಣೆಗೆ ಬಿಜೆಪಿ ಸರಕಾರ ದಿಟ್ಟ ಕ್ರಮ: ನಳಿನ್ ಕುಮಾರ್

February 9, 2021

ಮಂಗಳೂರು: ಗೋಹತ್ಯೆ ನಿಷೇಧ ವಿಧೇಯಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗಿದ್ದು, ಬಿಜೆಪಿ ಸರಕಾರ ಗೋ ಸಂರಕ್ಷಣೆಗೆ ದಿಟ್ಟ ಕ್ರಮ‌ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಗೋ ಹತ್ಯೆ ನಿಷೇದ ಜಾರಿಗೊಳಿಸುವ ಮೂಲಕ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದೆ. ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕ ವನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್ ತನ್ನ ನಿಜಬಣ್ಣವನ್ನು ಬಯಲು ಮಾಡಿದೆ. ಗೋಹತ್ಯೆಗೆ ಪ್ರಚೋದನೆ ನೀಡುವ ಕಾಂಗ್ರೆಸ್ ಪಕ್ಷವನ್ನು ಜನತೆ ಕ್ಷಮಿಸುವುದಿಲ್ಲ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

error: Content is protected !!