ಫೆ.11 ರಂದು ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ವಾರ್ಷಿಕೋತ್ಸವ

February 9, 2021

ಮಡಿಕೇರಿ ಫೆ.9 : ಸುಮಾರು 225 ವರ್ಷಗಳ ಇತಿಹಾಸ ಹೊಂದಿರುವ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ವಾರ್ಷಿಕೋತ್ಸವವು ಫೆ.11ರಂದು ನಡೆಯಲಿದೆ.
ಅಂದು ಸಂಜೆ 5 ಗಂಟೆಗೆ ಮೈಸೂರು ವಲಯ ಧರ್ಮಾಧ್ಯಕ್ಷ ಡಾ.ಕೆ.ಎ.ವಿಲಿಯಂ ಅವರು ದಿವ್ಯ ಬಲಿಪೂಜೆಯನ್ನು ನೆರವೇರಿಸಲಿದ್ದಾರೆ.
ಮೈಸೂರು ಮತ್ತು ಕೊಡಗು ಭಾಗದ ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಚರ್ಚ್ ಧರ್ಮಗುರು ರೆ.ಫಾ.ಮದಲೈ ಮುತ್ತು ಅವರು ತಿಳಿಸಿದ್ದಾರೆ.

error: Content is protected !!