ಸೋಮವಾರಪೇಟೆಯಲ್ಲಿ ವಿದ್ಯುತ್ ಸೇವೆಗಳ ಅರಿವು ಸಪ್ತಾಹ ಕಾರ್ಯಕ್ರಮ

February 10, 2021

ಸೋಮವಾರಪೇಟೆ ಫೆ. 10 : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಸಾರ್ವಜನಿಕರು ಹಾಗೂ ಗ್ರಾಹಕರಿಗೆ ವಿದ್ಯುತ್ ಸೇವೆಗಳ ಅರಿವು ಸಪ್ತಾಹ ಕಾರ್ಯಕ್ರಮ ಉಪವಿಭಾಗ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಪಾಲಕ ಅಭಿಯಂತರ ಅಶೋಕ್ ಮಾತನಾಡಿ, ತಾಲೂಕಿನ ಶಾಖಾ ವ್ಯಾಪ್ತಿಗೆ ಒಳಪಡುವ ಗ್ರಾಮಾಂತರ ಗುಡ್ಡಪ್ರದೇಶಗಳಲ್ಲಿ ತಡೆರಹಿತ ವಿದ್ಯುತ್ ಸರಬರಾಜು ಮಾಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಗಂಗಕಲ್ಯಾಣ ಯೋಜನೆಯಡಿ ಕೊರೆಸಿರುವ ಕೊಳವೆ ಬಾವಿಗಳಿಗೆ ನಿಗಮದ ವತಿಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಹಕರ ಜನಸಂಪರ್ಕ ಸಭೆ ನಡೆಯುತ್ತಿದ್ದು, ಬಳಕೆದಾರರು ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

ಸಹಾಯಕ ಕಾರ್ಯಪಾಲಕ ಅಭಿಯಂತರ ಧನುಂಜಯ್ ಮಾತನಾಡಿ, ಅನೇಕ ವರ್ಷಗಳಿಂದ ವಿದ್ಯುತ್‍ಸೌಲಭ್ಯವನ್ನು ಪಡೆಯದೆಯಿರುವ 8 ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಸೋಮವಾರಪೇಟೆ ಪಟ್ಟಣದಲ್ಲಿ ಐಪಿಡಿಎಸ್ ಯೋಜನೆಯಡಿ ಶೀಥಿಲಗೊಂಡ ಕಂಬಗಳನ್ನು ಬದಲಾಯಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭ ವಿದ್ಯುತ್‍ಬಿಲ್‍ನ್ನು ಪ್ರತಿ ತಿಂಗಳು ಪ್ರಾಮಾಣಿಕವಾಗಿ ಪಾವತಿಸಿದ ಗ್ರಾಹಕರನ್ನು ಸನ್ಮಾನಿಸಲಾಯಿತು.

error: Content is protected !!