ಕೊಡಗಿನಲ್ಲಿ ಕೋವಿಡ್ : 5999 ಮಂದಿ ಗುಣಮುಖ

February 11, 2021

ಮಡಿಕೇರಿ ಡಿ. 11 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6136 ಆಗಿದ್ದು, 5999 ಮಂದಿ ಗುಣಮುಖರಾಗಿದ್ದಾರೆ. 56
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 38 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.