ಫೆ.12 ರಂದು ಮಡಿಕೇರಿಯಲ್ಲಿ ‘ಕಾವೇರಿ ವಸ್ತ್ರ ಸಿರಿ’ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

February 11, 2021

ಮಡಿಕೇರಿ ಫೆ.10 : ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 12 ರಿಂದ 21 ರ ವರೆಗೆ ‘ಕಾವೇರಿ ವಸ್ತ್ರ ಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಫೆಬ್ರವರಿ 12 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಆರ್.ಮಂಜುಳ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಕೈಮಗ್ಗ ಮತ್ತು ಜವಳಿ ಇಲಾಖೆ ದಕ್ಷಿಣ ವಿಭಾಗದ ಜಂಟಿ ನಿರ್ದೇಶಕರಾದ ಎ.ಸುರೇಶ್ ಕುಮಾರ್, ನಗರಸಭೆ ಪೌರಾಯುಕ್ತರಾದ ರಾಮದಾಸ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಅವರು ತಿಳಿಸಿದ್ದಾರೆ.

error: Content is protected !!