ಕೆ.ನಿಡುಗಣೆ ಗ್ರಾ.ಪಂ. ಅಧ್ಯಕ್ಷರಾಗಿ ಕೊಕ್ಕಲೇರ ಕೆ. ಅಯ್ಯಪ್ಪ ಆಯ್ಕೆ

February 11, 2021

ಮಡಿಕೇರಿ ಫೆ. 11 : ಕೆ.ನಿಡುಗಣೆ ಗ್ರಾ.ಪಂ. ಅಧ್ಯಕ್ಷರಾಗಿ ಕೊಕ್ಕಲೇರ ಕೆ. ಅಯ್ಯಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಹೆಬ್ಬೆಟ್ಟಗೇರಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೊಕ್ಕಲೇರ ಕೆ. ಅಯ್ಯಪ್ಪ, ಜನಪರ ಅಭಿವೃದ್ಧಿ ಕಾರ್ಯಗಳಿಂದಾಗಿ ಅವಿರೋಧವಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದರು. ಇದೀಗ ಸದಸ್ಯರ ಸಹಕಾರದೊಂದಿಗೆ ಅಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ 2010ರಲ್ಲಿ ಕೆ.ನಿಡುಗಣೆ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕೆ.ಕೆ. ಅಯ್ಯಪ್ಪ, ಎರಡನೇ ಬಾರಿಗೆ ಈಗ ಅಧ್ಯಕ್ಷರಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಕೆ.ಬಾಡಗ ಕ್ಷೇತ್ರದ ಪಾರ್ವತಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭ ಮಾತನಾಡಿದ ಗ್ರಾ.ಪಂ. ನೂತನ ಅಧ್ಯಕ್ಷ ಕೊಕ್ಕಲೇರ ಕೆ. ಅಯ್ಯಪ್ಪ, ಸದಸ್ಯನಾಗಿ ಅವಿರೋಧವಾಗಿ ಆಯ್ಕೆಯಾದಗ ಸಂತಸವಾಗಿತ್ತು. ಇದೀಗ ಅಧ್ಯಕ್ಷನಾಗಿಯೂ ಅವಿರೋಧವಾಗಿ ಆಯ್ಕೆಯಾಗಿರುವುದು ಸಂತಸದೊಂದಿಗೆ ಜವಬ್ದಾರಿ ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಗ್ರಾ.ಪಂ.ಯ ಎಲ್ಲಾ ಕ್ಷೇತ್ರಗಳನ್ನು ಗಮನದಲ್ಲಿರಿಸಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು. ಅಧ್ಯಕ್ಷರಾಗಿ ಆಯ್ಕೆಯಾಗಲು ಕಾರಣಕರ್ತರಾದ ಎಲ್ಲಾ ಸದಸ್ಯರು, ಮತದಾರರು ಹಾಗೂ ಮುಖಂಡರಿಗೆ ಈ ಮೂಲಕ ದನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು.
ಗ್ರಾ.ಪಂ. ಉಪಾಧ್ಯಕ್ಷೆ ಕೆ.ಡಿ. ಪಾರ್ವತಿ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಗ್ರಾ.ಪಂ. ಸದಸ್ಯರಾದ ರೀಟಾ ಮುತ್ತಣ್ಣ, ಡೀನ್ ಬೋಪಣ್ಣ, ಜಾನ್ಸನ್ ಪಿಂಟೋ, ಪಿ.ಸಿ. ರಘು, ಪ್ರಮೀಳಾ ಸುರೇಶ್, ಅನಿತಾಪ್ರಮೋದ್, ಸತೀಶ್ ಪೂಜಾರಿ ಮತ್ತಿತರರು ಹಾಜರಿದ್ದರು.

error: Content is protected !!