ಸೋಮವಾರಪೇಟೆಯಲ್ಲಿ ಬಾಲ ಕಾರ್ಮಿಕ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ

February 11, 2021

ಮಡಿಕೇರಿ ಫೆ. 11 : ಕೋವಿಡ್ ಭೀತಿಯಿಂದಾಗಿ ಬಾಲ್ಯಾವಸ್ಥೆಯ ಹಾಗೂ ಕಿಶೊರಾವಸ್ಧೆಯ ಮಕ್ಕಳನ್ನು ವಿವಿಧ ಸಂಸ್ಥೆಗಳ ಮಾಲೀಕರುಗಳು ಕೆಲಸಕ್ಕೆ ನಿಯೋಜಿಸಿ ಕೊಳ್ಳದಂತೆ ಕ್ರಮವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ವಿಶೇಷ ಮಕ್ಕಳ ಪೊಲೀಸ್ ಘಟಕ ಹಾಗೂ ಮಕ್ಕಳ ರಕ್ಷಣಾ ಘಟಕದ ಸಹಭಾಗಿತ್ವದಲ್ಲಿ ಸೋಮವಾರಪೇಟೆಯಲ್ಲಿ ಬಾಲ್ಯಾವಸ್ಥೆಯ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯ ಅನ್ವಯ ಅನಿರೀಕ್ಷಿತ ತಪಾಸಣೆ ನಡೆಯಿತು.
ತಾಲ್ಲೂಕಿನ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ಬಾಲ್ಯಾವಸ್ಥೆಯ ಹಾಗೂ ಕಿಶೊರಾವಸ್ಧೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಬಗ್ಗೆ ಭಿತ್ತಿ ಪತ್ರಗಳನ್ನು ಹಾಗೂ ಕರಪತ್ರಗಳನ್ನು ವಿತರಿಸಿ ಅರಿವು ಮೂಡಿಸಿದರು.

ಅಲ್ಲದೇ ತಪ್ಪಿತಸ್ಥರ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದ್ದು, ಕಾರ್ಯಚರಣೆ ವೇಳೆ ಕಂಡುಬಂದ ಬಾಲಕಾರ್ಮಿಕನನ್ನು ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಪುನರ್ವಸತಿ ಗೊಳಿಸಲಾಗಿದೆ.

ಈ ಸಂದರ್ಭ ಹಿರಿಯ ಕಾರ್ಮಿಕ ನಿರಿಕ್ಷಕರಾದ ಲೀನಾ, ಯೋಜನಾ ನಿರ್ದೇಶಕ ಆರ್. ಶೀರಾಜ್ ಅಹ್ಮದ್, ಕಿರಣ್, ಅನುಷಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಸುಮತಿ, ಮಹೇಶ್, ವಿಶೇಷ ಮಕ್ಕಳ ಪೊಲೀಸ್ ಘಟಕದ ಅಧಿಕಾರಿಗಳು ಪಾಲ್ಗೊಂಡಿದ್ದರು.

error: Content is protected !!