ಹಾಲುಗುಂದ ಗ್ರಾ.ಪಂ ಅಧ್ಯಕ್ಷರಾಗಿ ಸೀತೆಬೊಳ್ಳಿ, ಉಪಾಧ್ಯಕ್ಷರಾಗಿ ಪಂದಿಕಂಡ ಎ. ದಿನೇಶ ಆಯ್ಕೆ

February 11, 2021

ಮಡಿಕೇರಿ ಫೆ. 11 : ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾದ ಸೀತೆಬೊಳ್ಳಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮೂರು ಬಾರಿ ಸದಸ್ಯರಾದ ಪಂದಿಕಂಡ ಎ. ದಿನೇಶ (ಕುಶ) ಆಯ್ಕೆಯಾಗಿದ್ದಾರೆ.
ಒಟ್ಟು ಹತ್ತು ಸದಸ್ಯರ ಬಲವಿರುವ ಹಾಲುಗುಂದ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನ ಎಸ್.ಟಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಘೋಷಣೆಯಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಿರುವುದರಿಂದ ಸೀತೆಬೊಳ್ಳಿರವರು ಅವಿರೋಧ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಂದಿಕಂಡ ದಿನೇಶ(ಕುಶ) ಎಂಟು ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದ ಗ್ರಾಮ ಪಂಚಾಯತಿ ಸದಸ್ಯರು ಹಾಜರಿದ್ದರು.