ಫೆ.15 ರಂದು ನಗರಾಭಿವೃದ್ಧಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

February 11, 2021

ಮಡಿಕೇರಿ ಫೆ.11 : ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಫೆ. 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಫೆಬ್ರವರಿ, 15 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ಕೆಯುಐಡಿಎಫ್‍ಸಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 01 ಗಂಟೆಗೆ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ನಗರದ ಕ.ನ.ನೀ.ಸ ಮತ್ತು ಒಳ ಚರಂಡಿ ಮಂಡಳಿ ಹಾಗೂ ಕೆ.ಯು.ಐ.ಡಿ.ಎಫ್.ಸಿ. ಮತ್ತು ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ. ಸಂಜೆ 5 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ನಾಗರಾಜು ಅವರು ತಿಳಿಸಿದ್ದಾರೆ.

error: Content is protected !!