ಗೌಡಳ್ಳಿ ಶಿವಪುರ ಗ್ರಾಮದಲ್ಲಿ ಮಾಂಸದ ತ್ಯಾಜ್ಯದಿಂದ ಕಲುಷಿತ ವಾತಾವರಣ : ಕರವೇ ಅಸಮಾಧಾನ

11/02/2021

ಸೋಮವಾರಪೇಟೆ ಫೆ.11 : ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದ ರಾಜ್ಯಹೆದ್ದಾರಿ ಬದಿಯಲ್ಲಿ ಕೋಳಿ ಮಾಂಸದಂಗಡಿಯ ತ್ಯಾಜ್ಯವನ್ನು ಹಾಕುತ್ತಿರುವ ಹಿನ್ನೆಲೆಯಲ್ಲಿ ವಾತಾವರಣ ವಾಸನೆಯಿಂದ ನಾರುತ್ತಿದೆ ಎಂದು ಸಾರ್ವನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಳಿ ಅಂಗಡಿಗಳ ಮಾಲೀಕರು ತ್ಯಾಜ್ಯವನ್ನು ಸೂಕ್ತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ರಸ್ತೆ ಬದಿಯಲ್ಲಿ ಎಸೆಯುತ್ತಿರುವವರ ವಿರುದ್ಧ ಪಟ್ಟಣ ಪಂಚಾಯಿತಿ ಸೂಕ್ತ ಕ್ರಮಕೈಗೊಳ್ಳಬೇಕು. ಕೂಡಲೆ ತ್ಯಾಜ್ಯವನ್ನು ತೆಗೆದು ಸ್ವಚ್ಚ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಾ ಒತ್ತಾಯಿಸಿದ್ದಾರೆ. ಕಸವಿಲೇವಾರಿಗೆ ಗ್ರಾಮ ಪಂಚಾಯಿತಿ ಸೂಚಿಸುವ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.