ಫೆ. 14ರಂದು ಅರುವತ್ತೋಕ್ಲುವಿನಲ್ಲಿ ಹೋಬಳಿ ಮಟ್ಟದ ಗ್ರಾಮೀಣ ಕ್ರೀಡಾಕೂಟ

February 12, 2021

ಮಡಿಕೇರಿ ಫೆ. 11 : ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಫೆ. 14 ರಂದು ಅರುವತ್ತೋಕ್ಲುವಿನಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಲಿದೆ.
ಕರ್ನಾಟಕ ಸರ್ಕಾರ, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಜಿಲ್ಲಾ ಯುವ ಒಕ್ಕೂಟ, ಕೊಡಗು ತಾಲೂಕು ಯುವ ಒಕ್ಕೂಟ ವಿರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ಹಾಗೂ ನಿಸರ್ಗ ಯುವತಿ ಮಂಡಳಿ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 10.30ಕ್ಕೆ ಅರುವತ್ತೋಕ್ಲುವಿನ ಸರ್ವದೈವತಾ ವಿದ್ಯಾಸಂಸ್ಥೆಯ ಆವರಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ಸಂಜೆ 4 ಗಂಟೆಗೆ ವಿರಾಜಪೇಟೆ ತಾ.ಪಂ. ಸದಸ್ಯೆ ಆಶಾ ಪೂಣಚ್ಚ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ.
ಎಂದು ನಿಸರ್ಗಯುವತಿ ಮಂಡಳಿಯ ಅಧ್ಯಕ್ಷರಾದ ರೇಖಾ ಶ್ರೀಧರ್ ಮಾಹಿತಿ ನೀಡಿದ್ದಾರೆ.
ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘಸಂಸ್ಥೆಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

error: Content is protected !!