ನರಿಯಂದಡ ಗ್ರಾ.ಪಂ ಅಧ್ಯಕ್ಷರಾಗಿ ಬಿ.ಎಂ. ಅಚ್ಚಯ್ಯ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ

February 12, 2021

ಮಡಿಕೇರಿ ಫೆ. 11 : ನರಿಯಂದಡ ಗ್ರಾ.ಪಂ ಅಧ್ಯಕ್ಷರಾಗಿ ಬಿ.ಎಂ. ಅಚ್ಚಯ್ಯ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾಗಿದ್ದಾರೆ.
ನರಿಯಂದಡ ಗ್ರಾ.ಪಂ ಸಭಾಂಗಣದಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಚುನಾವಣಾಧಿಕಾರಿ ಗುರುಸ್ವಾಮಿ ಅವರ ನೇತೃತ್ವದಲ್ಲಿ ನಡೆಸಲಾಯಿತು.
ನೂತನವಾಗಿ ಆಯ್ಕೆಗೊಂಡ 15 ಸದಸ್ಯರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರು.
ಈ ಸಂದರ್ಭ ಜಿ.ಪಂ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾ.ಪಂ ಸದಸ್ಯೆ ಟಿ.ಪಿ. ಉಮಾಪ್ರಭು, ಗ್ರಾ.ಪಂ ಮಾಜಿ ಸದಸ್ಯರುಗಳು, ಪಕ್ಷದ ಕಾರ್ಯಕರ್ತರು ಹಾಜರಿದ್ದರು.

error: Content is protected !!