ಚೆಂಬು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಕೆ

February 12, 2021

ಮಡಿಕೇರಿ ಫೆ.12 : ನೂತನವಾಗಿ ಆಯ್ಕೆಯಾದ ಚೆಂಬು ಗ್ರಾ.ಪಂ ಅಧ್ಯಕ್ಷೆ ಕಾಂಗ್ರೆಸ್ ಬೆಂಬಲಿತ ಕುಸುಮಾ ಯೋಗೇಶ್ವರ್ ಹಾಗೂ ಉಪಾಧ್ಯಕ್ಷೆ ಶಶಿಕಲಾ ಕಟ್ಟೆಪಾರೆ ಅವರನ್ನು ಪಕ್ಷದ ವತಿಯಿಂದ ಅಭಿನಂದಿಸಲಾಯಿತು.
ಚೆಂಬು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್ ಅವರು, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವ ಮೂಲಕ ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವಂತೆ ಕಿವಿಮಾತು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದÀ ಅಧ್ಯಕ್ಷರಾದ ಸುರಯ್ಯ ಅಬ್ರಾರ್ ಅವರು ಗ್ರಾ.ಪಂ ಚುನಾವಣೆಯಲ್ಲಿ ಜಯಗಳಿಸಿದ ಮತ್ತು ಪರಾಜಿತಗೊಂಡ ಮಹಿಳಾ ಅಭ್ಯರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹದ ಮಾತುಗಳನ್ನಾಡಿದರು.
ಚೆಂಬು ಗ್ರಾಮದ ಕಾಂಗ್ರೆಸ್ ಮುಖಂಡ ಬಾಲಂಬಿ ಸೋಮಣ್ಣ, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ó ಪ್ರವೀಣ್, ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ರಾಜೇಶ್ವರಿ, ಕಾರ್ಮಿಕ ಘಟಕದ ಮಂಗಳೂರು ಅಧ್ಯಕ್ಷ ಕೆ.ಪಿ.ಜಾನಿ, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಸಂಪಾಜೆ ಗ್ರಾ.ಪಂ ಸದಸ್ಯ ಸುರೇಶ್ ಪಿ.ಎಲ್, ಎನ್.ಸಿ.ಮನೋಹರ್, ಜಿ.ವಿ.ಗಣಪಯ್ಯ, ಬಿ.ಎಸ್.ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಮುಖರಾದ ಜೀವಿ ಗಣಪಯ್ಯ ನಿರೂಪಿಸಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಸ್ವಾಗತಿಸಿ, ವಂದಿಸಿದರು.

error: Content is protected !!